Tuesday, 18th January 2022

ಚಿನ್ನದ ದರದಲ್ಲಿ ಕೊಂಚ ಇಳಿಕೆ: 10 ಗ್ರಾಂ ಗೆ 44,600 ರೂ

#Gold Today

ನವದೆಹಲಿ: ದೇಶದ ವಿವಿಧ ನಗರಗಳಲ್ಲಿ ಡಿ.1ರಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು ಈಗ ಕೊಂಚ ಇಳಿಕೆಯಾಗಿರುವುದು ಗ್ರಾಹಕರಲ್ಲಿ ಸಂತಸ ತಂದಿದೆ.

ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 44,600 ರೂಪಾಯಿ ಹಾಗೂ 24 ಕ್ಯಾರಟ್‌ ಬೆಲೆ 48,650 ರೂಪಾಯಿ ದಾಖಲಾಗಿದೆ.

ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 47,590.00ರು ಹಾಗೂ ಬೆಳ್ಳಿ ಬೆಲೆ ಇಳಿಕೆ ಕಂಡು 61, 701ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ ಗೆ ಶೇ +3.00ಇಳಿಕೆಯಾಗಿ 1,794 ಯುಎಸ್ ಡಾಲರ್‌ನಷ್ಟಿದೆ.

ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.