ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸಲು ಜ.4ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸುವಂತೆ ಸೂಚಿಸಿದ್ದಾರೆ. ಈ ಮೂಲಕ ವಾರದ 6 ದಿನ ಕೆಲಸ ನಿರ್ವಹಿಸು ವುದಕ್ಕೆ ತಿಳಿಸಲಾಗಿದೆ.