Sunday, 14th August 2022

ಬುಲಂದ್‌ಶಹರ್-ಮೀರತ್ ಹೆದ್ದಾರಿಯಲ್ಲಿ ಅಪಘಾತ: ಐವರ ಸಾವು

ಬುಲಂದ್‌ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್-ಮೀರತ್ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಆರು ಮಂದಿಗೆ  ಗಾಯಗೊಂಡಿರುವ ಘಟನೆ ನಡೆದಿದೆ.

ಮೃತ ಕುಟುಂಬವು ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ತೆರಳುತ್ತಿದ್ದಾಗ ಬುಲಂದ್‌ಶಹರ್‌ನ ಗುಲಾವತಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರಕ್‌ಗೆ ಡಿಕ್ಕಿ ಹೊಡೆದ ಮಹೀಂದ್ರಾ ಸ್ಕಾರ್ಪಿಯೊದಲ್ಲಿ ಕುಟುಂಬದ 11 ಮಂದಿ ಇದ್ದರು. ಗಾಯಗೊಂಡವನ್ನು ಮೀರತ್‌ನ ವೈದ್ಯಕೀಯ ಕಾಲೇಜಿಗೆ ದಾಖಲಿಸ ಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ತಿಳಿಸಿದ್ದಾರೆ.

ಮೃತರನ್ನು ಹಾರ್ದಿಕ್ (6 ವರ್ಷ), ವಂಶ್ (5), ಶಾಲು (21), ಹಿಮಾಂಶು (25) ಮತ್ತು ಪರಾಸ್ (22) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ.