Sunday, 27th November 2022

ಸಹೋದ್ಯೋಗಿಗಳ ಮೇಲೆ ಶೌಟೌಟ್‌: ಐವರ ಸಾವು

ಅಮೃತಸರ: ಪಂಜಾಬ್‌ನ ಅಮೃತಸರದ ಫೋರ್ಸ್ ಕ್ಯಾಂಪ್‌ನಲ್ಲಿ ಭಾನುವಾರ ಬಿಎಸ್‌ಎಫ್ ಜವಾನ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಐವರು ಸಿಬ್ಬಂದಿ ಮೃತಪಟ್ಟಿ ದ್ದಾರೆ.

ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದ ಫೋರ್ಸ್ ಮೆಸ್‌ನಲ್ಲಿ ಈ ಘಟನೆ ನಡೆದಿದೆ.

ಗುಂಡಿನ ದಾಳಿ ನಡೆಸಿದ ಜವಾನ ಸೇರಿದಂತೆ ಐವರು ಯೋಧರ ಮೃತಪಟ್ಟಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಹೇಳಿದ್ದಾರೆ.