Friday, 2nd December 2022

ಎರಡು ಟ್ರಕ್‌-ಕಾರಿನ ನಡುವೆ ಡಿಕ್ಕಿ: ಆರು ಮಂದಿ ಸಾವು

ಅಹಮದಾಬಾದ್: ಎರಡು ಟ್ರಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವಾಹಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆರು ಮಂದಿ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಅರಾವಳಿ ಜಿಲ್ಲೆಯ ಮೊದಸಾ-ಧನ್ಸೂರಾ ರಸ್ತೆಯ ಆಲಂಪುರ್ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅಪಘಾತದ ನಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಸಂಚಾರವನ್ನು ಸ್ವಲ್ಪ ಸಮಯ ಸ್ಥಗಿತಗೊಳಿಸಲಾಗಿತ್ತು. ಪರಿಣಾಮ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು ಎನ್ನಲಾಗುತ್ತಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಡಿಕ್ಕಿಯ ನಂತರ ರಾಸಾಯನಿಕ ತುಂಬಿದ್ದ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದೆ.