Tuesday, 27th September 2022

6,563 ಹೊಸ ಸೋಂಕು ಪ್ರಕರಣ ಪತ್ತೆ

covid

ನವದೆಹಲಿ:  ದೇಶಾದ್ಯಂತ 6500ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6,563 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ದೇಶಾ ದ್ಯಂತ 7,081 ಹೊಸ ಸೋಂಕು ಪ್ರಕರಣಗಳು ದಾಖಲಾಗಿತ್ತು.

ಲಸಿಕಾ ಅಭಿಯಾನ ಮುಂದುವರೆದಿದ್ದು, ಈ ವರೆಗೂ 137.67 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.