Thursday, 19th May 2022

6,987 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆ

covid

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 6,987 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 162 ಮಂದಿ ಮೃತ ಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,86,802ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,79,682ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 76,766ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 7,091 ಮಂದಿ ಗುಣಮುಖರಾಗುವುದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 3,42,30,354ಕ್ಕೆ ತಲುಪಿದೆ. ಒಂದೇ 11,12,195 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 67,10,51,627 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 141.37 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.