Thursday, 11th August 2022

ಟ್ರಕ್‍ಗೆ ಗುದ್ದಿದ ಆಂಬುಲೆನ್ಸ್ : ಏಳು ಮಂದಿ ಸಾವು

ಲಖನೌ: ಉತ್ತರ ಪ್ರದೇಶದ ಭರೇಲಿ ಜಿಲ್ಲೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಬುಲೆನ್ಸ್ ಟ್ರಕ್‍ಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನರು ಮೃತಪಟ್ಟಿದ್ದಾರೆ.

ಆರೋಗ್ಯ ತಪಾಸಣೆ ಮಾಡಿಸಿಕೊಂಡು ಫಿಲ್‍ಬಿಟ್‍ಗೆ ಹಿಂದಿರುಗುತ್ತಿದ್ದಾಗ ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಆಂಬುಲೆನ್ಸ್ ಮೊದಲು ಡಿವೈಡರ್‍ಗೆ ಡಿಕ್ಕಿ ಹೊಡೆದು ನಂತರ ಎದುರಿಗೆ ಬರುತ್ತಿದ್ದ ಟ್ರಕ್‍ಗೆ ಗುದ್ದಿದೆ. ಪರಿಣಾಮ ಚಾಲಕ ಹಾಗೂ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.