Tuesday, 17th May 2022

ಒಮೈಕ್ರಾನ್ ಭೀತಿ: ಭಾರತದಲ್ಲಿ ಸೋಂಕಿತರ ಸಂಖ್ಯೆ 781 ಕ್ಕೆ ಏರಿಕೆ

Omicrone V

ನವದೆಹಲಿ : ವಿಶ್ವದಾದ್ಯಂತ ಕರೋನಾ ರೂಪಾಂತರಿ ಒಮೈಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 781 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 781 ಕೇಸ್ ಗಳು ಪತ್ತೆಯಾಗಿದ್ದು, ದೆಹಲಿಯಲ್ಲಿ 238 ಪ್ರಕರಣಗಳಿವೆ. 241 ರೋಗಿಗಳು ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರ ದಲ್ಲಿ 167 ಒಮೈಕ್ರಾನ್ ಪ್ರಕರಣಗಳು ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,195 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ.