Wednesday, 5th August 2020

ಸಬ್​​ ಇನ್ಸ್​​ಪೇಕ್ಟರ್ ಆತ್ಮಹತ್ಯೆ

ಹಾಸನ

ಸಬ್​​ ಇನ್ಸ್​​ಪೇಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಇವರು ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್​ಐ​​ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚನ್ನರಾಯಪಟ್ಟಣದ ತಮ್ಮ ಮನೆಯಲ್ಲಿ ಸಮವಸ್ತ್ರದಲ್ಲಿ ಫ್ಯಾನ್​ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.

ಆರೋಪಿಗಳನ್ನು ಬಂಧಿಸುವಲ್ಲಿ ರಾಜಕೀಯ ಒತ್ತಡವಿತ್ತು ಎಂದು ಹೇಳಲಾಗುತ್ತಿದೆ, ಚನ್ನರಾಯಪಟ್ಟಣದಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮೃತ ಎಸ್‌ಐ ಕಿರಣ್ ನಡೆಸಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಎಎಸ್‌ಪಿ ನಂದಿನಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮುನ್ನ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Leave a Reply

Your email address will not be published. Required fields are marked *