ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:
ಸಿಲಿಕಾನ್ ಸಿಟಿಯಲ್ಲಿ 1,852 ಸೇರಿ ರಾಜ್ಯದಲ್ಲಿ ಶನಿವಾರ 5,172 ಮಂದಿಗೆ ಕರೋನಾ ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,29,287ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಒಂದೇ ದಿನ 98 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,412 ಮಂದಿ ಕರೋನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ 3,860 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,29,287 ಸೋಂಕಿತರ ಪೈಕಿ 73,219 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 53,648 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 602 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ 21,075 ರಾಪಿಡ್ ಟೆಸ್ಟ್ನಲ್ಲಿ 13,685 ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು 34,760 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 1,68,330 ಮಂದಿಗೆ ರಾಪಿಡ್ ಟೆಸ್ಟ್, 12,17,222 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 13,85,552 ಮಂದಿಗೆ ಕರೋನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ 1,852 ಮಂದಿಗೆ ಸೋಂಕು ದೃಢವಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮೈಸೂರು 365, ಬಳ್ಳಾರಿ 269, ಕಲಬುರಗಿ 219, ಬೆಳಗಾವಿ 219 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು 5 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ನಗರ 1,683, ಬಳ್ಳಾರಿ 408, ತುಮಕೂರು 225, ದಾವಣಗೆರೆ 188, ಶಿವಮೊಗ್ಗ 131, ಕಲಬುರಗಿ 130, ರಾಯಚೂರು 115, ಬಾಗಲಕೋಟೆ 101, ಉಡುಪಿ 100, ಬೆಂಗಳೂರು ಗ್ರಾಮಾಂತರ 89, ಮೈಸೂರು 74, ಚಿತ್ರದುರ್ಗ 72, ಕೊಪ್ಪಳ 71, ಉತ್ತರ ಕನ್ನಡ 65, ಬೀದರ್ 61, ವಿಜಯಪುರ 55, ದಕ್ಷಿಣ ಕನ್ನಡ 54, ಬೆಳಗಾವಿ 51, ಧಾರವಾಡ 50, ಗದಗ 43, ಮಂಡ್ಯ 27, ಚಿಕ್ಕಬಳ್ಳಾಪುರ 24, ಚಾಮರಾಜನಗರ 15, ಯಾದಗಿರಿ 15, ಹಾವೇರಿ 12 ಹಾಗೂ ಚಿಕ್ಕಮಗಳೂರಿನಲ್ಲಿ ಓರ್ವ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
……
ಕರೋನಾ ಗೆದ್ದ 110 ವರ್ಷದ ಅಜ್ಜಿ
ಚಿತ್ರದುರ್ಗದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕರೋನಾ ಪಾಸಿಟಿವ್ನಿಂದಾಗಿ ಜಿಲ್ಲಾ ಕರೋನಾ ಆಸ್ಪತ್ರೆಗೆ ದಾಖಲಾಗಿದ್ದ 110 ವರ್ಷದ ಅಜ್ಜಿ ಗುಣಮುಖರಾಗಿ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲಿನ ಪೊಲೀಸ್ ಕ್ವಾಟ್ರಸ್ ನಲ್ಲಿ ತಮ್ಮ ಮೊಮ್ಮಗನೊಂದಿಗೆ ಹಲವು ವರ್ಷಗಳಿಂದ ವಾಸವಾಗಿದ್ದ ಅಜ್ಜಿ, ತುಂಬಾ ಆರೋಗ್ಯವಾಗಿದ್ದರು. ಬಿಪಿ, ಶುಗರ್ ಸೇರಿದಂತೆ ಇನ್ನಿತರ ವಯೋಸಹಜ ಯಾವುದೇ ಖಾಯಿಲೆಗಳು ಸಹ ಇರಲಿಲ್ಲ. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಇವರ ಮನೆಯಲ್ಲಿ ವಾಸವಾಗಿದ್ದ ಇಬ್ಬರು ಮಹಿಳೆಯರು ಹಾಗೂ ಒಂದು ವರ್ಷದ ಮಗುವಿಗೆ ಕರೋನಾ ಸೋಂಕು ಪತ್ತೆ ಯಾಗಿತ್ತು. ಆಗ ಅಜ್ಜಿ ಸೇರಿದಂತೆ ಏಳು ಜನರನ್ನು ತಪಾಸಣೆಗೆ ಒಳಪಡಿಸಿದಾಗ ಇವರಿಗೂ ಸೋಂಕು ತಗುಲಿರುವುದು ದೃಢವಾಗಿತ್ತು.
|
|