Wednesday, 30th October 2024

ರಾಮಜನ್ಮಭೂಮಿ ಪೂಜೆ: ರಾಜ್ಯದಲ್ಲಿ ಕಟ್ಟೆೆಚ್ಚರ

ವಿಶ್ವವಾಣಿ ಸುದ್ದಿಮನೆ

ಬೆಂಗಳೂರು:

ಪ್ರಧಾನಿ ನರೇಂದ್ರ ಮೋದಿಯವರಿಂದ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸುವಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸೂಚನೆ ನೀಡಿದ್ದಾರೆ.

ಆಗ್ಟ್ 5 ರಂದು ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಆಯೋಧ್ಯೆ ರಾಮ ಮಂದಿರ ವಿಚಾರ ಅತೀ ಸೂಕ್ಷ್ಮ ವಾಗಿರುವುದರಿಂದ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವವಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು. ಸಾರ್ವಜನಿಕ ಶಾಂತಿ ಕಾಪಾಡಬೇಕು ಎಂದಿದ್ದಾರೆ.

ಇನ್ನು ಈ ಬಗ್ಗೆೆ ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿರುವ ಅವರು, ಭದ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.