ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ರಾಜಧಾನಿ ಕಬ್ಬನ್ ಪಾರ್ಕ್‌ನಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸುಸಜ್ಜಿತವಾದ ಶತಮಾನೋತ್ಸವ ಗ್ರಂಥಾಲಯ ಭವನವನ್ನು ನಿರ್ಮಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಗರದ ಬಿಟಿಎಂ ಬಡಾವಣೆಯ 2ನೇ ಹಂತದಲ್ಲಿ ನೂತನ ಗ್ರಂಥಾಲಯದ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಇತರೆ ರಾಜ್ಯಗಳಲ್ಲಿ ಇರುವ ಗ್ರಂಥಾಲಯ ವ್ಯವಸ್ಥೆೆಯನ್ನು ಅವಲೋಕಿಸಿ ಎಲ್ಲ ವರ್ಗದ ಓದುಗರಿಗೆ ಅನುಕೂಲವಾಗುವ ರೀತಿಯಲ್ಲಿ ಮಾದರಿ ಶತಮಾನೋತ್ಸವ ಗ್ರಂಥಾಲಯ ನಿರ್ಮಾಣ ಮಾಡಲಾಗುವುದು. ಗ್ರಂಥಾಲಯದೊಂದಿಗಿನ ತಮ್ಮ ಸಂಬಂಧವನ್ನು ನೆನಪಿಸಿಕೊಂಡ ಸಚಿವರು, ನನ್ನ ಜೀವನದಲ್ಲಿ ನಾನೇನಾದರೂ ಸಾಧನೆ ಮಾಡಿದ್ದಾದರೆ ಅದರ ಎಲ್ಲ ಶ್ರೇಯಸ್ಸು ಸಾರ್ವಜನಿಕ ಗ್ರಂಥಾಲಯಕ್ಕೆೆ ಅರ್ಪಿತವಾಗಬೇಕು. ಗ್ರಂಥಾಲಯದ ಓದಿನ ಮೂಲಕವೇ ನಾನು ಕಾನೂನು ಪದವಿ ಪಡೆದೆ. ಗ್ರಂಥಾಲಯ ಎಂಬುದು ಶ್ರೀಸಾಮಾನ್ಯನ ಒಂದು ವಿಶ್ವವಿದ್ಯಾಲಯವಿದ್ದಂತೆ ಎಂದು ಅವರು ಅಭಿಪ್ರಾಯಪಟ್ಟರು.
ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ 272 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ ಇದು ಅಭೂತ ಪ್ರಯತ್ನವಾಗಿದೆ.
ಕರೋನಾ ಸೋಂಕು ಸೃಷ್ಟಿಸಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಉಪಕ್ರಮವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯದ ಇಲಾಖೆ ವತಿಯಿಂದ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆ್ಯಪ್ ಅನ್ನು ಲೋಕಾರ್ಪಣೆಗೊಳಿಸಿದ್ದು, ಇಂದು ಮೂರು ಲಕ್ಷಕ್ಕೂ ಹೆಚ್ಚು ಜನ ಈ ಆ್ಯಪ್ ಬಳಸುತ್ತಿದ್ದಾರೆ. ಒಂದು ಲಕ್ಷಕ್ಕೂ ಮೀರಿದ ಪುಸ್ತಕಗಳು ಈ ಆ್ಯಪ್‌ನಲ್ಲಿ ಲಭ್ಯವಾಗುತ್ತವೆ. ಪುಸ್ತಕ ಸಂಸ್ಕೃತಿ ಬೆಳೆಸಲು ರಾಜ್ಯಾದ್ಯಂತ 6841 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ದೇಶದಲ್ಲಿಯೇ ಮಾದರಿ ಗ್ರಂಥಾಲಯ ವ್ಯವಸ್ಥೆೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವರ್ಗದ ಜನರ ಜ್ಞಾನಾರ್ಜನೆಗೆ ಉಪಯೋಗವಾಗುವಂತೆ ಗ್ರಂಥಾಲಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ರಾಮಲಿಂಗಾರೆಡ್ಡಿ, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ವಿಧಾನಸಭೆ ಸದಸ್ಯೆ ಸೌಮ್ಯರೆಡ್ಡಿ, ಬಿಬಿಎಂಪಿ ಸದಸ್ಯ ದೇವದಾಸ್, ಇಲಾಖೆ ಅಧಿಕಾರಿಗಳು ಇದ್ದರು.