Thursday, 28th November 2024

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ನಾಗನಗೌಡ

ತುಮಕೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಅವಳಿ ಮಕ್ಕಳು ಮೃತಪಟ್ಟಿರುವುದು ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ತಮ್ಮ ವೈಫಲ್ಯದ ಬಗ್ಗೆ ವೈದ್ಯಾಧಿಕಾರಿಗಳು ಒಪ್ಪಿಕೊಂಡಿದ್ದು ಮುಂದಿನ ದಿನಗಳಲ್ಲಿ ಹೀಗೆ ಆಗದಂತೆ ಕ್ರಮ ವಹಿಸಲಾಗುವುದು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನಗೌಡ ಹೇಳಿದರು.

ಪ್ರಕರಣ ಸಂಬ0ಧ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದು ಮಾತನಾಡಿ, ದಾಖಲೆ ಗಿಂತ ಪ್ರಾಣ ಮುಖ್ಯ ಅನ್ನೋದನ್ನು ಮರೆಯಬಾರದು.ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಕೇಂದ್ರದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ವರದಿ ನೀಡುತ್ತೇವೆ. ಬಾಲಕಿ ಮಕ್ಕಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಇರುತ್ತದೆ. ಮಗುವಿನ ಸಂಪೂರ್ಣ ಜವಾಬ್ದಾರಿ ಸರ್ಕಾರ ಹೊರುತ್ತದೆ ಎಂದರು.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷö್ಯದಿಂದ ಬಾಣಂತಿ ಹಾಗೂ ಅವಳಿ ಶಿಶುಗಳು ಸಾವನ್ನಪ್ಪಿರುವಂತಹ ಪ್ರಕರಣ ನಡೆದಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಸಿಬ್ಬಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಿ ಜಾಗೃತಿ ಮೂಡಿಸುವ ಜೊತೆಗೆ ವ್ಯವಸ್ಥೆ ಬಿಗಿಗೊಳಿಸುವ ಅನಿವಾರ್ಯತೆ ಇದೆ ಎಂದರು.

ನಂತರ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ತುಮಕೂರು ಜಿಲ್ಲಾಸ್ಪತ್ರೆ ಪ್ರಕರಣ ನ್ಯಾಷನಲ್ ಕಮೀಷನ್‌ವರೆಗೂ ಹೋಗಿದೆ. ಒಂದು ತಪ್ಪು ಆಗಿದೆ ಮುಂದೆ ಈ ರೀತಿಯ ತಪ್ಪುಗಳು ಆಗದಂತೆ ತಡೆಯುವುದು ಮುಖ್ಯವಾಗಿದೆ. ಆಸ್ಪತ್ರೆಗಳಿಗೆ ಬರುವವರಲ್ಲಿ ಮೊದಲು ಯಾರಿಗೆ ಚಿಕಿತ್ಸೆ ಆಗಬೇಕು ಅವರನ್ನು ಪರಿಗಣಿಸುವಂತಾಗಬೇಕು ಎಂಬುದನ್ನು ಅರಿತು ಸಿಬ್ಬಂದಿ ಕೆಲಸ ಮಾಡಬೇಕಿದೆ. ಈ ಸಂಬAಧ ಸರ್ಕಾರ ಸಹ ಸೂಚನೆ ಕೊಟ್ಟಿದೆ, ನಾವೂ ಕೂಡ ಕೊಡುತ್ತೇವೆ ಎಂದರು.

ಈ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆಯಾಗಲಿದೆ. ಜಿಲ್ಲೆ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲು ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಡಿಹೆಚ್‌ಒ ಮತ್ತು ಟಿಹೆಚ್‌ಒಗಳು ಸಿಸ್ಟಮ್‌ನ ಬಿಗಿಗೊಳಿಸಬೇಕಿದೆ ಎಂದರು. ಶಿಕ್ಷಣ, ವಸತಿ ಮೂಲ ಸೌಕರ್ಯ ನೀಡಲು ನಿರಾಶ್ರಿತರ ಕೇಂದ್ರ ಇದೆ.

ಅಲ್ಲಿನ ಬಾಲಮಂದಿರದಲ್ಲಿ ಬಾಲಕಿಗೆ ವ್ಯವಸ್ಥೆ ಆಗಲಿದೆ ಎಂದು ತಿಳಿಸಿದ ನಾಗನಗೌಡರು ಮೃತಪಟ್ಟಿರುವ ಮಹಿಳೆ ತಮಿಳು ನಾಡು ಮೂಲದವರಾಗಿದ್ದು ಅಲ್ಲಿನ ಅವರ ಸಂಬಂಧಿಕರನ್ನು ಕರೆಸಿಕೊಂಡು ಶವಗಳ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದರು. ಜಿಲ್ಲಾ ಆರೋಗ್ಯಾಧಿಕಾರಿ ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ರಮೇಶ್, ಮಕ್ಕಳ ರಕ್ಷಣಾಧಿಕಾರಿ  ಪವಿತ್ರ ಇದ್ದರು.