ದೋಡಾ ಜಿಲ್ಲೆಯ ಆರ್ & ಬಿ ಕಾರ್ಯನಿರ್ವಾಹಕ ಇಂಜಿನಿಯರ್, ಎಇಇ ಮತ್ತು ಸೂಪ ರಿಂಟೆಂಡಿಂಗ್ ಎಂಜಿನಿಯರ್ ರನ್ನು ಹೊತ್ತೊಯ್ಯುತ್ತಿದ್ದ ವಾಹನ -ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಅಸ್ಸಾರ್ ಬಳಿ ಬೆಳಿಗ್ಗೆ 10.45ರ ಸುಮಾರಿಗೆ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಸ್ಥಳೀಯ ಠಾಣಾಧಿಕಾರಿ ಭುವಿಂದರ್ ಕೊತ್ವಾಲ್ ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಪೂಂಚ್ನ ಕಾರ್ಯನಿರ್ವಾಹಕ ಇಂಜಿನಿಯರ್ ರಫೀಕ್ ಷಾ, ಉಧಂಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರಿಂಗ್ ಕಮಲ್ ಕಿಶೋರ್ ಶರ್ಮಾ ಮತ್ತು ಚಾಲಕ ಮೊಹಮ್ಮದ್ ಹಫೀಜ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಅಪಘಾತದಲ್ಲಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಸುರೇಶ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.