Saturday, 21st December 2024

ಬಾಕಿ ವೇತನಕ್ಕೆ ಒತ್ತಾಯಿಸಿ ನಾಳೆಯಿಂದ ಆಂಬುಲೆನ್ಸ್ ನೌಕರರ ಮುಷ್ಕರ

ಬೆಂಗಳೂರು: ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ನಾಳೆಯಿಂದ ಆಂಬುಲೆನ್ಸ್ ನೌಕರರು ಮುಷ್ಕರ ನಡೆಸಲಿದ್ದು, ರಾಜ್ಯಾ ಧ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

108 ಆಂಬುಲೆನ್ಸ್ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಪರಮಶಿವಯ್ಯ, ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವ ಜಿವಿಕೆ ವೇತನವನ್ನು ಬಾಕಿ ಉಳಿಸಿಕೊಂಡಿದೆ. ವೇತನವಿಲ್ಲದೇ ನೌಕರರು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಈ ಹಿನ್ನಲೆ ಯಲ್ಲಿ ನಾಳೆ ಸಂಜೆ ಯೊಳಗೆ ಸಂಬಳ ನೀಡದೇ ಇದ್ದರೇ ಆಂಬುಲೆನ್ಸ್ ಸೇವೆ ಸ್ಥಗಿತ ಗೊಳಿಸುವುದಾಗಿ ಎಚ್ಚರಿಸಿದ್ದಾರೆ.

ಗುರುವಾರದ ಒಳಗೆ ನೀಡದೇ ಇದ್ದರೇ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಆಂಬುಲೆನ್ಸ್ ಸೇವೆ ಸ್ಥಗಿತದಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾದರೇ ಅದಕ್ಕೆ ಜಿವಿಕೆ ಸಂಸ್ಥೆಯೇ ನೇರ ಕಾರಣ ಎಂಬುದಾಗಿ ಹೇಳಿದರು.

ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾತುಕತೆ ನಡೆಸಿ, ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುಂದುವರೆಸಿ ಕೊಂಡು ಹೋಗುವಂತೆ, ಬಾಕಿ ವೇತನ ಬಿಡುಗಡೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿಯೂ ಭರವಸೆ ನೀಡಿದ್ದಾರೆ ಎನ್ನಲಾಗಿದೆ.