Tuesday, 26th November 2024

ಎಸ್‌ಎಸ್‌ಎಲ್‌ಸಿ ಶೇ.71.08 ಫಲಿತಾಂಶ

ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ
– ಯಾದಗಿರಿ  ಕೊನೆಯ ಸ್ಥಾನ
ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಶೇ.71.08ರಷ್ಟು ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಸೋಮವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷ ಬರೆದ 8.11 ಲಕ್ಷ ವಿದ್ಯಾರ್ಥಿಗಳ ಪೈಕಿ 5.82 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2.28 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.  ಕಳೆದ ಹಲವು ವರ್ಷಗಳಂತೆಯೇ ಈ ಬಾರಿ ಕೂಡ ಬಾಲಕಿಯರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಗಂಡು ಮಕ್ಕಳು ಶೇ. 66.41ರಷ್ಟು ಮತ್ತು ಹೆಣ್ಣು ಮಕ್ಕಳು ಶೇ.77.74ರಷ್ಟು  ಫಲಿತಾಂಶ ಗಳಿಸಿದ್ದಾರೆ. 68 ವಿದ್ಯಾಾರ್ಥಿಗಳು 621 ಮತ್ತು 117 ವಿದ್ಯಾಾರ್ಥಿಗಳು 620 ಅಂಕ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಕರೋನಾ ಸೋಂಕಿನ ಭೀತಿಯಿಂದ 18,067 ವಿದ್ಯಾಾರ್ಥಿಗಳು ಮೊದಲು ಪರೀಕ್ಷ ಬರೆಯದೆ, ಪೂರಕ ಪರೀಕ್ಷಗೆ ಹಾಜರಾಗಿದ್ದರು. 227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಿತು. 52,219 ಮೌಲ್ಯಮಾಪಕರು ಉತ್ತರಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ.
ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶದ ಸಂದೇಶ ಕಳುಹಿಸಲಾಗಿದೆ, ಮಂಗಳವಾರ ಬೆಳಿಗ್ಗೆ ಆಯಾ ಶಾಲೆಗಳಲ್ಲಿ ಫಲಿತಾಂಶವನ್ನು ನೋಡಬಹುದು. karresults.kar.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಿದೆ ಎಂದು ತಿಳಿಸಿದ್ದಾರೆ.