ವಾಹನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 44 ಯಾತ್ರಾರ್ಥಿಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರ ಗಾಯಗೊಂಡ ಎಂಟು ವರ್ಷದ ಬಾಲಕ ಸೇರಿದಂತೆ ಮೂವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸ ಲಾಗಿದ್ದು, 18 ಮಂದಿಯನ್ನು ಇಲ್ಲಿನ ಜನರಲ್ ಆಸ್ಪತ್ರೆಗೆ ಮತ್ತು ಉಳಿದವರನ್ನು ಸಮೀಪದ ಪೆರಿನಾಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೋಟಾರು ವಾಹನ ಇಲಾಖೆ ಅಧಿಕಾರಿ ಗಳು ಹಾಗೂ ಸ್ಥಳೀಯರು ಜಂಟಿಯಾಗಿ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಅಪಘಾತದ ತೀವ್ರತೆಯನ್ನು ಕಡಿಮೆ ಮಾಡಿದೆ.
ಸ್ಥಳಕ್ಕಾಗಮಿಸಿದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, ಗಾಯಗೊಂಡ ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.