ಸುಗ್ರೀವಾಜ್ಞೆಯನ್ನು ಸಹಿ ಮಾಡದೇ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ವಾಪಸ್ ಕಳುಹಿಸಿದ್ದಾರೆ. ಸರ್ಕಾರ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಕಾನೂನು ತರುವುದನ್ನು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ಹಿಂದಕ್ಕೆ ಕಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಪ್ರಸ್ತುತ ಎಂದು ಹೇಳಿದ್ದಾರೆ.
ಕೇರಳ ವಿಧಾನಸಭೆಯ ಸಭಾಧ್ಯಕ್ಷರು ಮಾತನಾಡಿ, ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿರುವುದು ಅಸ್ವಾಭಾವಿಕವೇನಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಬಾರದೆಂಬ ಸ್ಪಷ್ಟ ನಿಲುವು ಹೊಂದಿದ್ದಾರೆ.