Wednesday, 27th November 2024

24 ಗಂಟೆಯಲ್ಲಿ 9860 ಮಂದಿಗೆ ಸೋಂಕು

ಬೆಂಗಳೂರು:
ಕರ್ನಾಟಕದಲ್ಲಿ ಕರೋನಾ ಹಾವಳಿ ಮುಂದುವರಿದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 9860 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ಕರೋನಾ ಸೋಂಕಿಗೆ 113 ಮಂದಿ ಮೃತಪಟ್ಟಿದ್ದಾರೆ.
ಇದರಿಂದ ರಾಜ್ಯದ ಕರೋನಾ ಸೋಂಕಿತರ ಸಂಖ್ಯೆ 3,61,341 ಕ್ಕೆ ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ ಕರೋನಾದಿಂದ ಮೃತಪಟ್ಟವರ ಸಂಖ್ಯೆ 5950 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 3420 ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಯಲ್ಲಿ 32 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು 3,61,341 ಪ್ರಕರಣಗಳ ಪೈಕಿ 2,60,913 ಮಂದಿ ಸಂಪೂರ್ಣ ಗುಣಮುಖರಾಗಿ ಕರೋನಾ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇನ್ನೂ ರಾಜ್ಯದಲ್ಲಿ 94,459 ಸಕ್ರಿಯ ಕರೋನಾ ಪ್ರಕರಣಗಳು ಇವೆ. ರಾಜ್ಯದಲ್ಲಿ 751 ಮಂದಿ ಕರೋನಾ ಸೋಂಕಿತರು ಐಸಿಯುನಲ್ಲಿದ್ದಾರೆ.
 ಕರೋನಾ ಸೋಂಕಿನಿಂದ ಒಂದೇ ದಿನ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 6,287. ಕರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 2383 ಇದೆ‌. ಇತ್ತೀಚಿಗೆ ಗುಣಮುಖರಾದವರ ಸಂಖ್ಯೆ ಹೆಚ್ಚಾಗುತ್ತಿರುವುದು ಜನತೆಯಲ್ಲಿ ಭಯದ ವಾತಾವರಣ ದೂರ ಮಾಡಿದೆ.