Wednesday, 30th October 2024

24 ಗಂಟೆಯಲ್ಲಿ 8,865 ಮಂದಿಗೆ ಕರೋನಾ ಸೋಂಕು

ಬೆಂಗಳೂರು:
 ಕರ್ನಾಟಕದಲ್ಲಿ ಗುರುವಾರ 8,865 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಂದೇ ದಿನ 104 ಜನರು ಮೃತಪಟ್ಟಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 6054ಕ್ಕೆ ಏರಿಕೆಯಾಗಿದೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 96098.  ರಾಜ್ಯದಲ್ಲಿ 7122 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. 735 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ರಾಜ್ಯದಲ್ಲಿ 2,68,035 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು ನಗರದಲ್ಲಿ ಗುರುವಾರ 3189 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,38,701ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 40,440. ಇದುವರೆಗೂ ನಗರದಲ್ಲಿ 2066 ಜನರು ಮೃತಪಟ್ಟಿದ್ದಾರೆ.
ಗುರುವಾರ ದಕ್ಷಿಣ ಕನ್ನಡದಲ್ಲಿ 316, ದಾವಣಗೆರೆ 222, ಚಿಕ್ಕಬಳ್ಳಾಪುರ 104, ಬೆಳಗಾವಿ 454, ಬಳ್ಳಾರಿ 424, ಧಾರವಾಡ 342, ಹಾಸನ 252 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.