ನೋಯ್ಡಾ : ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೊಲೀಸ್ ಆಯುಕ್ತರಾಗಿ ಲಕ್ಷ್ಮೀ ಸಿಂಗ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಮೊದಲ ಮಹಿಳಾ ಪೊಲೀಸ್ ಆಯುಕ್ತರು ನೇಮಕ ಗೊಂಡಂತಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾ ರವು ಆಡಳಿತಾತ್ಮಕ ಪುನರ್ರಚನೆಯ ಭಾಗವಾಗಿ ಹಲವಾರು ಜಿಲ್ಲೆಗಳಲ್ಲಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.
ವಾರಣಾಸಿ, ಆಗ್ರಾ, ಗೌತಮ್ ಬುದ್ಧ ನಗರ, ಗಾಜಿಯಾಬಾದ್, ಅಯೋಧ್ಯೆ, ಮಥುರಾ, ಲಕ್ನೋ, ಬಹ್ರೈಚ್ ಮತ್ತು ಪ್ರಯಾಗ್ರಾಜ್ ಸೇರಿದಂತೆ ವಿವಿಧ ಜಿಲ್ಲೆಗಳ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ದೆಹಲಿಯ ಪಕ್ಕದ ಪ್ರಮುಖ ಜಿಲ್ಲೆಗಳಲ್ಲಿ ಒಂದಾದ ಗೌತಮ್ ಬುದ್ಧ ನಗರದ ಪೊಲೀಸ್ ಕಮಿಷನರ್ ಅಲೋಕ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ಪ್ರಧಾನ ಕಚೇರಿಯಲ್ಲಿ (ಲಕ್ನೋ) ಜವಾಬ್ದಾರಿಯನ್ನು ನೀಡಲಾಗಿದೆ. ಅಲೋಕ್ ಸಿಂಗ್ ಅವರಿಂದ ತೆರವಾದ ಗೌತಮ ಬುದ್ಧ ನಗರದ ಆಯುಕ್ತರ ಜಾಗಕ್ಕೆ ಐಪಿಎಸ್ ಲಕ್ಷ್ಮೀ ಸಿಂಗ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.