ತುಮಕೂರು: ಸರಕಾರಿ ಶಾಲೆಗಳಲ್ಲಿ ಮೂಲ ಸವಲತ್ತುಗಳಿಲ್ಲ. ಹಲವಾರು ಹಳ್ಳಿಗಳಲ್ಲಿ ಬಸ್ ಸೌಲಭ್ಯವಿಲ್ಲ. ವಿದ್ಯಾರ್ಥಿಗ ಳಿಗಾಗಿ ಜಾರಿಗೊಳಿಸಿದ್ದ ಸೈಕಲ್ ವಿತರಣೆ ನಿಲ್ಲಿಸಲಾಗಿದೆ. ಈ ಎಲ್ಲದರ ಬಗ್ಗೆಯೂ ಅಸಮಾಧಾನವಿದೆ ಎಂದು ಮಾಜಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ವಿವಿಧ ಸ್ಥಳಗಳಲ್ಲಿ ಸಾಗಿದ ಪಂಚರತ್ನರಥಯಾತ್ರೆಯಲ್ಲಿ ಮಾತನಾಡಿ, ರೈತರು ಮತ್ತೆ ಸಾಲಗಾರರಾಗುತ್ತಿದ್ದಾರೆ. ರೈತರು ಸಾಲಗಾರರಾಗದಂತೆ ಕಾರ್ಯಕ್ರಮ ರೂಪಿಸುವ ಚಿಂತನೆ ಇದೆ. ಸರ್ಕಾರದಿಂದ ಕೃಷಿ ವೆಚ್ಚ ಭರಿಸುವುದು, ರೈತ ಬೆಳೆದ ಬೆಳೆಗಳ ಸಂರಕ್ಷಣೆ ಗಾಗಿ ಶೈತ್ಯಾಗಾರ ಸ್ಥಾಪನೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ರೈತರಿಗಾಗಿ ಯೋಜಿಸ ಲಾಗಿದೆ. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ೨೪ ಗಂಟೆಗಳಲ್ಲಿ ಸ್ತಿçÃಶಕ್ತಿ ಸಂಘಗಳ ಸಾಲ ಮನ್ನಾ ಮಾಡಲಾಗುವುದು. ಮಹಿಳೆಯರ ಆರ್ಥಿಕ ಸಬಲತೆಗೂ ಒತ್ತು ನೀಡುವುದು ನಮ್ಮ ಪಕ್ಷದ ಗುರಿಯಾಗಿದೆ ಎಂದರು.
ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಯೋಜನೆ, ವಸತಿ ಕಟ್ಟಿಸಿಕೊಂಡುವ ಯೋಜನೆ , ಪ್ರತಿಯೊಂದು ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲಿ ೨೪*೭ ಕಾರ್ಯ ನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣದ ಯೋಜನೆ ಹಾಕಿಕೊಳ್ಳಲಾಗಿದೆ. ಆಧುನಿಕ ತಂತ್ರಜ್ಞಾನದ ಕೃಷಿ ಪದ್ದತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣಾ ವ್ಯವಸ್ಥೆ ಹಾಗೂ ಲಾಭದಾಯಕವಾದ ಮಾರ್ಗ ವ್ಯವಸ್ಥೆ, ಯುವಜನತೆ ಮತ್ತು ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡುವ ಸಲುವಾಗಿ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದರು.
ನನ್ನ ಆರೋಗ್ಯಕ್ಕಿಂತ ನಾಡಿನ ಜನರ ಹಿತ ಮುಖ್ಯ. ಹಾಗಾಗಿ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ೨೧ನೇ ಶತಮಾನ ದಲ್ಲೂ ಬಡತನ ನಿರ್ಮೂಲನೆಯಾಗಿಲ್ಲ. ಈಗ ನರೇಂದ್ರ ಮೋದಿ ಅವರು ಬಂದು ಅಚ್ಛೇದಿನ ಎಂದು ಹೇಳುತ್ತಲೇ ೮ ವರ್ಷ ಗಿದೆ. ಇಂತಹ ಪರಿಸ್ಥಿತಿಯಲ್ಲಿ ಪಂಚರತ್ನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ನಮ್ಮ ಮುಖ್ಯ ಧ್ಯೇಯವಾಗಿದೆ. ರಾಜ್ಯದ ೬ ಸಾವಿರ ಗ್ರಾಮ ಪಂಚಾಯಿತಿಗಳಲ್ಲೂ ಸರ್ಕಾರಿ ಶಾಲೆಗಳು ನಿರ್ಮಾಣವಾಗಿ ಉಚಿತವಾಗಿ ತಾರತಮ್ಯವಿಲ್ಲದೆ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋವಿಡ್ ಸಂದರ್ಭದಲ್ಲಿ ಹಾಸಿಗೆಯಿಲ್ಲ, ವೆಂಟಿಲೇಟರ್ ಇಲ್ಲ ಎಂದು ಜನರನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಯಿತು. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ೩ ಮಂದಿ ತಜ್ಞ ವೈದ್ಯರು, ೩೦ ಸಿಬ್ಬಂದಿಯೊAದಿಗೆ ೩೦ ಹಾಸಿಗೆ ಯುಳ್ಳ ಆಸ್ಪತ್ರೆ ನಿರ್ಮಾಣದ ಗುರಿ ಹೊಂದಲಾಗಿದೆ. ಅಲ್ಲದೆ ವೈದ್ಯರಿಗೆ ತಗುಲುವ ವೆಚ್ಚವನ್ನು ಸಹ ಭರಿಸಲು ನಿರ್ಧರಿಸಲಾಗಿದೆ. ಬಿಪಿಎಲ್ ಕಾರ್ಡ್ದಾರ ಕುಟುಂಬಗಳ ಆರೋಗ್ಯ ಸೇವೆಗೆ ಸರ್ಕಾರದಿಂದಲೇ ಹಣ ಪಾವತಿಸಬೇಕು.
ಯಾವುದೇ ಕಾರಣಕ್ಕೂ ಬಡವರು ಮನೆಮಠ, ಆಸ್ತಿಪಾಸ್ತಿ ಮಾರುವಂತಾಗಬಾರದು. ಇದು ನಮ್ಮ ಪಕ್ಷದ ಧ್ಯೇಯವಾಗಿದೆ ಎಂದ ಅವರು, ಬಿಜೆಪಿ ಪಕ್ಷಕ್ಕೆ ಮತ ಹಾಕುವವರು ಇದನ್ನೆಲ್ಲ ಅರ್ಥ ಮಾಡಿಕೊಳ್ಳಬೇಕು ಎಂದರು. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರ ಆರೋಗ್ಯ ಸೇವೆಗೆ ೪೦ ಲಕ್ಷ ರೂ.ಗಳ ವಿಮೆ ಮಾಡಿಸಿ ಸರ್ಕಾರದಿಂದಲೇ ಆರೋಗ್ಯ ಸೇವೆಗೆ ಹಣ ಭರಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.