ಬೆಂಗಳೂರಲ್ಲಿ ಕೆಲವು ದಿನಗಳಿಂದ ವಾತಾವರಣ ಸಹಜ ಸ್ಥಿತಿಯಲ್ಲಿದ್ದು, ಡಿಸೆಂಬರ್ 7ವರೆಗೆ ಇದೇ ರೀತಿ ಚಳಿ ಮುಂದುವರಿಯ ಲಿದೆ.
ಡಿಸೆಂಬರ್ 7ರಿಂದ 10ರವರೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಬೀಳಲಿದೆ. ಉಳಿದಂತೆ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ದಕ್ಷಿಣ ಅಂಡಮಾನ್ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಸೋಮ ವಾರ ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ನಿರ್ಮಾಣವಾಗಿದ್ದು, ಇದು ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಮಾರ್ಗವಾಗಿ ಬರಲಿದೆ.
ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಡಿ. 8ರಿಂದ ಭಾರಿ ಮಳೆ ಆಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.