Friday, 22nd November 2024

ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಕ್ಕೆ ನಿಷೇಧ: ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ್ ಆದೇಶ

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಮಂಗಳವಾರ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿ ಸಿದೆ. ಜೊತೆಗೆ ಜಿಲ್ಲೆಯಲ್ಲಿ 14, ಸೆಕ್ಷನ್ ಜಾರಿ ಮಾಡಲಾಗಿದೆ.

ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಸೂಚನೆ ಮೆರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ್ ಅವರು ಸೋಮ ವಾರ ಮಹಾರಾಷ್ಟ್ರ ಸಚಿವರ ಗಡಿ ಪ್ರವೇಶಕ್ಕೆ ನಿರ್ಬಂಧ ಹಾಕಿದ್ದಾರೆ.

ಜಿಲ್ಲಾಡಳಿತದ ಈ ನಿರ್ಧಾರದಿಂದಾಗಿ ಮಹಾರಾಷ್ಟ್ರ ಸಚಿವರು ಮಂಗಳವಾರದ ಭೇಟಿ‌ ನೀಡುವುದು ಅನುಮಾನ ಎನ್ನಲಾಗಿದೆ.

ಮಂಗಳವಾರ ಮಹಾರಾಷ್ಟ್ರ ರಾಜ್ಯದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ಜವಳಿ ಹಾಗೂ ಸಂಸದೀಯ ವ್ಯವಹಾರ ಸಚಿವ ಚಂದ್ರಕಾಂತ ಪಾಟೀಲ್, ಅಬಕಾರಿ ಸಚಿವ ಶಂಬುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಅವರು ಬೆಳಗಾವಿ ಜಿಲ್ಲೆಗೆ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ತಿಳಿದು ಬಂದಿದೆ.

ಸಚಿವರು ಮತ್ತು ಸಂಸದ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆ ಧಕ್ಕೆಯಾಗುವ ಸಾಧ್ಯತೆ ಇದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇರುತ್ತೆ.

ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ವಹಿಸಿ, ಬೆಳಗಾವಿ ಗಡಿ ಪ್ರವೇಶಿಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಗಡಿಯನ್ನು ಪ್ರವೇಶಿಸಿ, ಈ ಸಚಿವರು, ಸಂಸದರು ಪ್ರಚೋದನಾಕಾರಿ ಭಾಷಣ ಅಥವಾ ಪ್ರಚೋದ ನಾಕಾರಿ ಹೇಳಿಕೆ ನೀಡುವ ಸಾಧ್ಯತೆಗಳು ಇವೆ.