ದೆಹಲಿ ಪೊಲೀಸರು ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿದ್ದು, ತನಿಖೆ ಪ್ರಗತಿ ಯಲ್ಲಿದೆ ಎಂದು ಹೇಳಿದ್ದಾರೆ. ವಿಚಾರಣೆಯ ನಂತರ ನ್ಯಾಯಾಲಯವು ಪೂನಾವಾಲಾನ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತು. ಇದಕ್ಕೂ ಮುನ್ನ ನ್ಯಾಯಾಲಯವು ಅಫ್ತಾಬ್ ನನ್ನು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಇಂದಿಗೆ ಕೊನೆಗೊಳ್ಳಲಿದೆ.
ಅಫ್ತಾಬ್ ಪೂನವಾಲಾ ದೆಹಲಿಯ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾಳನ್ನು ಕೊಂದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿರಿಸಿ ನಂತರ ಮೃತ ದೇಹದ ಭಾಗಗಳನ್ನು ರಾಷ್ಟ್ರ ರಾಜಧಾನಿಯಾದ್ಯಂತ ವಿವಿಧ ಸ್ಥಳಗಳಲ್ಲಿ ಎಸೆದಿದ್ದ.
ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಇಂದು ಮುಂಬೈ ಮರಾಠಿ ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನವೆಂಬರ್ನಲ್ಲಿ ಕೊಲೆ ಬೆಳಕಿಗೆ ಬಂದ ನಂತರ ಇದು ಅವರ ಮೊದಲ ಸಾರ್ವಜನಿಕ ಪತ್ರಿಕಾಗೋಷ್ಠಿಯಾಗಿದೆ.