ಚೆನ್ನೈ: ತಮಿಳುನಾಡಿನಾದ್ಯಂತ ಮಾಂಡೌಸ್ ಚಂಡಮಾರುತದ ರೌದ್ರಾವತಾರಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಾಂಡೌಸ್ ಅಬ್ಬರಕ್ಕೆ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿರುಗಾಳಿ, ಮಳೆ ಯಿಂದಾಗಿ ಚೆನ್ನೈ, ಚಂಗಲಪಟ್ಟು ಜಿಲ್ಲೆಗಳು ಜಲಾವೃತಗೊಂಡಿದ್ದು, ಜನರು ಪರದಾ ಡುವಂತಾಗಿದೆ.
ಈಗಾಗಲೇ ತಮಿಳುನಾಡಿನಲ್ಲಿ ಚಂಡಮಾರುತದ ಅನಾಹುತಕ್ಕೆ 6 ಜನರು ಮೃತಪಟ್ಟಿದ್ದು, ನೂರಾರು ಜಾನುವಾರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸಂಕಷ್ಟದಲ್ಲಿ ಸಿಲುಕಿದ್ದ 3163 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚೆನ್ನೈ ನಗರದಲ್ಲಿಯೇ 500 ಮರಗಳು ಧರಾಶಾಹಿಯಾಗಿವೆ.