ಆರ್ ಬಿಐ ಮಾಜಿ ಮುಖ್ಯಸ್ಥರಾಗಿರುವ ರಘುರಾಮ್ ರಾಜನ್, 2016ರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನೋಟು ಅಮಾನ್ಯೀ ಕರಣದ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದರು. ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ರಾಜನ್ ತಮ್ಮ ಪುಸ್ತಕ – I do what I do ದಲ್ಲಿ ನೋಟು ಅಮಾನ್ಯೀ ಕರಣವನ್ನು ಟೀಕಿಸಿದ್ದರು.
ಅಲ್ಪಾವಧಿಯ ಆರ್ಥಿಕ ವೆಚ್ಚಗಳು ದೀರ್ಘಾವಧಿಯ ಪ್ರಯೋಜನ ತರುವುದಿಲ್ಲ ಎಂದು ಹೇಳಿದ್ದರು. ರಾಜಸ್ಥಾನದ ಸವಾಯಿ ಮಾಧೋಪುರದ ಭಡೋತಿಯಿಂದ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಯಿತು. ಕಳೆದ ಸೆ.7ರಂದು ಕನ್ಯಾ ಕುಮಾರಿ ಯಿಂದ ಆರಂಭವಾದ ಯಾತ್ರೆ ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾ ರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಂಚರಿಸಿದೆ. ಇದು ಫೆಬ್ರವರಿ 2023 ರ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯ ಗೊಳ್ಳಲಿದೆ.
ಭಾರತ್ ಜೋಡೋ ಯಾತ್ರೆಯಲ್ಲಿ ಹಲವಾರು ರಾಜಕಾರಣಿಗಳು, ಚಿತ್ರರಂಗದ ಗಣ್ಯರು, ಕಾರ್ಯಕರ್ತರು ಮತ್ತು ಮಾಜಿ ಅಧಿಕಾರಿಗಳು ಭಾಗವಹಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯ 100 ದಿನಗಳನ್ನು ಗುರುತಿಸಲು ಕಾಂಗ್ರೆಸ್ ಶುಕ್ರವಾರ ಜೈಪುರದಲ್ಲಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಗಾಯಕಿ ಸುನಿಧಿ ಚೌಹಾಣ್ ಅವರ ಸಂಗೀತ ಕಾರ್ಯಕ್ರಮ ವಿರುತ್ತದೆ.