Thursday, 19th September 2024

ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 13ನೇ ಆವೃತ್ತಿಯ ವೇಳಾಪಟ್ಟಿ ಭಾನುವಾರ ಬಿಡುಗಡೆಯಾಗಿದೆ.

ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಟೂರ್ನಿಗೆ ಇನ್ನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ನವೆಂಬರ್ 3ರವರೆಗೆ ನಡೆಯಲಿರುವ ಲೀಗ್​ ಹಂತದ ಎಲ್ಲ 56 ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ಲೇಆಫ್​ ಹಂತದ ವೇಳಾಪಟ್ಟಿ ಬಿಡುಗಡೆಯಾಗಿಲ್ಲ. ಫೈನಲ್ ಪಂದ್ಯ ನವೆಂಬರ್ 10ರಂದು ನಿಗದಿಯಾಗಿದೆ.

ವಿರಾಟ್​ ಕೊಹ್ಲಿ ಸಾರಥ್ಯದ ಆರ್​​ಸಿಬಿ ತಂಡ ಸೆಪ್ಟೆಂಬರ್​ 21ರಂದು ಸನ್​ರೈಸರ್ಸ್ ತಂಡದ ವಿರುದ್ಧ ದುಬೈನಲ್ಲಿ ಆಡುವ ಮೂಲಕ ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿದೆ. ಸೆ. 20ರಂದು ಟೂರ್ನಿಯ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡಗಳು ಸೆಣಸಲಿವೆ.

10 ದಿನಗಳಲ್ಲಿ ತಲಾ 2 ಪಂದ್ಯಗಳು (ಡಬಲ್​ ಹೆಡರ್​) ನಡೆಯಲಿವೆ. ದುಬೈನಲ್ಲಿ 24, ಅಬುಧಾಬಿಯಲ್ಲಿ 20 ಮತ್ತು ಶಾರ್ಜಾದಲ್ಲಿ 12 ಲೀಗ್​ ಪಂದ್ಯಗಳು ನಡೆಯಲಿವೆ. ರಾತ್ರಿಯ ಪಂದ್ಯಗಳು ಭಾರತೀಯ ಕಾಲಮಾನದಂತೆ ರಾತ್ರಿ 7.30ಕ್ಕೆ ಆರಂಭಗೊಳ್ಳಲಿವೆ. ಸಂಜೆ ನಡೆಯಲಿರುವ ಪಂದ್ಯಗಳು 3.30ರಿಂದ ನಡೆಯಲಿವೆ.

53 ದಿನಗಳ ಟೂರ್ನಿಯಲ್ಲಿ 60 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈನಲ್ಲಿ ನಡೆಯಲಿವೆ. ಎಂದಿನಂತೆ ಡಬಲ್ ರೌಂಡ್ ರಾಬಿನ್ ಮಾದರಿಯಲ್ಲಿ ಟೂರ್ನಿ ನಡೆಯಲಿವೆ.

Leave a Reply

Your email address will not be published. Required fields are marked *