Monday, 25th November 2024

ಸುಪ್ರೀಂ ಕೋರ್ಟ್ನಿಂದ ನ್ಯಾಯ ಸಿಗದಿದ್ದಾಗ ಎಲ್ಲಿಗೆ ಹೋಗಬೇಕು: ದೆಹಲಿ ಮಹಿಳಾ ಆಯೋಗ

ನವದೆಹಲಿ: ಸುಪ್ರೀಂ ಕೋರ್ಟ್ನಿಂದ ಜನರಿಗೆ ನ್ಯಾಯ ಸಿಗದಿದ್ದಾಗ ಅವರು ಎಲ್ಲಿಗೆ ಹೋಗಬೇಕು ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶನಿವಾರ ಪ್ರಶ್ನಿಸಿದ್ದಾರೆ.
ಅವರು ಬಿಲ್ಕಿಸ್ ಬಾನು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಕೊಲೆ ಮಾಡಲಾ ಯಿತು.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಶಿಕ್ಷೆಯನ್ನು ಕಡಿತಗೊಳಿಸು ವಂತೆ ಅರ್ಜಿಗಳನ್ನು ಪರಿಗಣಿಸುವಂತೆ ಗುಜರಾತ್ ಸರ್ಕಾರವನ್ನು ಕೇಳಿದ್ದ ತನ್ನ ಹಿಂದಿನ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಬಿಲ್ಕಿಸ್ ಬಾನು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಬಿಲ್ಕಿಸ್ ಬಾನು ಅವರು 21 ವರ್ಷದವರಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾದರು ಮತ್ತು ಅವರ ಮೂರು ವರ್ಷದ ಮಗ ಸೇರಿದಂತೆ ಆರು ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಯಿತು. ಆದರೆ, ಗುಜರಾತ್ ಸರ್ಕಾರವು ಎಲ್ಲಾ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿತು.

Read E-Paper click here