Friday, 20th September 2024

ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳ ಅಪಘಾತ

ಗ್ರೇಟರ್ ನೋಯ್ಡಾ: ನೋಯ್ಡಾದ ನಾಲೆಡ್ಜ್ ಪಾರ್ಕ್ ಬಳಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಈ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ನೋಯ್ಡಾದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಡಿಕ್ಕಿ ಹೊಡೆದವು. ಈ ವೇಳೆ ಮೂವರು ಮೃತ ಪಟ್ಟಿದ್ದಾರೆ, ಅನೇಕ ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾ ಗಿದೆ’ ಎಂದು ಗ್ರೇಟರ್ ನೋಯ್ಡಾ ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

 

Read E-Paper click here