Friday, 22nd November 2024

ಉತ್ತರಕಾಶಿಯಲ್ಲಿ 3.1 ತೀವ್ರತೆಯ ಕಂಪನ

ತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. 3.1 ತೀವ್ರತೆಯ ಕಂಪನವು 1:50ರ ಸುಮಾರಿಗೆ ಸಂಭವಿಸಿದೆ.

ಉತ್ತರಕಾಶಿಯಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರಬಿಂದುವು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ 24 ಕಿಮೀ ದೂರದಲ್ಲಿ ರುವ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ 5 ಕಿಮೀ ಆಳದಲ್ಲಿದೆ ಎಂದು ತಿಳಿದು ಬಂದಿದೆ.

ಕಳೆದ ನವೆಂಬರ್ 9ರಂದು ತೆಹ್ರಿ ಪ್ರದೇಶದಲ್ಲಿ ಸಂಭವಿಸಿದ 4.5 ತೀವ್ರತೆಯ ಭೂಕಂಪ ದಿಂದ ಉತ್ತರಾಖಂಡವು ಕೊನೆಯದಾಗಿ ಆಘಾತಕ್ಕೊಳಗಾಯಿತು.

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 3.4 ತೀವ್ರತೆಯ ಭೂಕಂಪ ಸಂಭವಿಸಿತ್ತು. 

 

 

Read E-Paper click here