Thursday, 19th September 2024

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ೨೦೨೨-೨೩ನೇ ಸಾಲಿಗೆ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಪಂಗಡದ ೦೧ ಅಭ್ಯರ್ಥಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಯಲ್ಲಿ ೧೨ ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ ಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗು ವುದು. ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ0ದು ಅಭ್ಯರ್ಥಿಗಳಿಗೆ ೩೫ವರ್ಷ ಒಳಗಿರಬೇಕು.

ತರಬೇತಿಯ ಅವ ವೇಳೆ ಮಾಹೆಯಾನ ೧೫ ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವ ರನ್ನು ಈ ಯೋಜನೆಯಡಿ ಮತ್ತೊಂದು ಅವಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಗಿರಿಜನ ಉಪಯೋಜನೆಯಡಿ ಯಾವುದೇ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳ ಲಾಗುವುದು.

೨೦೨೨ರ ಡಿಸೆಂಬರ್ ೨೭ ರೊಳಗೆ ಅರ್ಜಿಸಲ್ಲಿಸಬೇಕು. ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಮೊ.ನಂ.೯೪೮೦೮೪೧೨೨೪, ವಾರ್ತಾ ಸಹಾಯಕರ ಮೊ.ನಂ. ೯೩೫೩೫೯೨೪೭೨ ಸಂಪರ್ಕಿಸುವ0ತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.