Saturday, 23rd November 2024

ಮಹಾರಾಷ್ಟ್ರಕ್ಕೆ 865 ಮರಾಠಿ ಭಾಷಿಕರ ಹಳ್ಳಿಗಳ ಸೇರ್ಪಡೆಗೆ ಅಂಗೀಕಾರ

ಮುಂಬೈ: ಕರ್ನಾಟಕದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರಗಳು ಮತ್ತು 865 ಮರಾಠಿ ಭಾಷಿಕರ ಹಳ್ಳಿಗಳನ್ನು ಸೇರಿಸಿಕೊಳ್ಳಲು ಕಾನೂನಾತ್ಮ ಹೋರಾಟ ನಡೆಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಈ ನಿರ್ಣಯ ಮಂಡಿಸಿದರು.

‘ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರ ಮತ್ತು 865 ಹಳ್ಳಿಗಳಲ್ಲಿರುವ ಮರಾಠಿ ಭಾಷಿಕರೊಂದಿಗೆ ಮಹಾರಾಷ್ಟ್ರ ಸರ್ಕಾರ ದೃಢವಾಗಿ ನಿಂತಿದೆ. ಕರ್ನಾಟಕದಲ್ಲಿ ರುವ ಮರಾಠಿ ಭಾಷಿಕ ಹಳ್ಳಿಗಳ ಇಂಚು ಭೂಮಿಯನ್ನೂ ಸೇರಿಸಿಕೊಳ್ಳಲು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನುಬದ್ಧವಾಗಿ ಹೋರಾಟ ನಡೆಸಲಿದೆ’ ಎನ್ನುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

ರಾಜ್ಯದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಮಹಾರಾಷ್ಟ್ರಕ್ಕೆ ಒಂದು ಇಂಚು ಭೂಮಿ ಯನ್ನೂ ಬಿಟ್ಟುಕೊಡುವುದಿಲ್ಲ ಎಂದು ನಿರ್ಣಯದಲ್ಲಿ ಹೇಳಲಾಗಿತ್ತು. ವಿವಾದವು ಮಹಾರಾಷ್ಟ್ರದ ಸೃಷ್ಟಿ ಎಂದು ಉಲ್ಲೇಖಿಸಲಾಗಿತ್ತು.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ 1957ಕ್ಕೂ ಹಿಂದಿನದು. ರಾಜ್ಯಗಳ ಮರವಿಂಗಡಣೆ ಕಾಯ್ದೆ ಮತ್ತು 1967 ರ ಮಹಾಜನ್ ಆಯೋಗದ ವರದಿಯ ಆಧಾರದಲ್ಲಿ ರಚನೆಯಾದ ಭಾಷಾವಾರು ರಾಜ್ಯಗಳ ಗಡಿರೇಖೆಯನ್ನು ಕರ್ನಾಟಕ ಪ್ರತಿಪಾದಿಸುತ್ತಿದೆ.

 
Read E-Paper click here