ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ್ II ಪ್ರದೇಶದಲ್ಲಿರುವ ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಬೆಂಕಿ ದುರಂತ ಸಂಭವಿ ಸಿದ್ದು, ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.