ಧಾರವಾಡ: ಧಾರವಾಡದಲ್ಲಿ ಜನವರಿ 12ರಿಂದ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಲೋಗೋ ಹಾಗೂ ಮ್ಯಾಸ್ಕಾಟ್ ಅನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.
ತಮ್ಮ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಜ. 12ರಿಂದ ಐದು ದಿನ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಇಡೀ ಧಾರವಾಡ ನಗರವನ್ನು ಸುಂದರಗೊಳಿಸುವತ್ತ ಜಿಲ್ಲಾಡಳಿತದ ಚಿತ್ತ ಹರಿಸಿದೆ.
ಯುವ ಸಮ್ಮೇಳನಕ್ಕೆ ಧಾರವಾಡದ ಉದ್ಯಾನವನ, ಕೆರೆಗಳನ್ನು ಶೃಂಗರಿಸ ಲಾಗುವುದು ಎನ್ನಲಾಗುತ್ತಿದೆ. ಈ ಹಿಂದೆ ಧಾರ ವಾಡದಲ್ಲಿ ನಡೆದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲೂ ಇದೇ ರೀತಿ ನಗರವನ್ನು ಶೃಂಗರಿಸ ಲಾಗಿತ್ತು.
ಇದೀಗ ನಾಲ್ಕು ವರ್ಷಗಳ ನಂತರ ರಾಷ್ಟ್ರೀಯ ಯುವ ಸಮ್ಮೇಳನಕ್ಕೆ ಬೇರೆ ಬೇರೆ ರಾಜ್ಯಗಳ ಅಂದಾಜು 7500 ಯುವ ಕಲಾವಿದರು ಆಗಮಿಸುತ್ತಿದ್ದಾರೆ. ಅತಿಥಿಗಳು, ಗಣ್ಯಮಾನ್ಯರು ಧಾರವಾಡದ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಧಾರವಾಡ ನಗರವನ್ನು ಸ್ವಚ್ಛಗೊಳಿಸಿ ಸುಂದರಗೊಳಿಸುವ ಅನಿವಾರ‍್ಯತೆಯೂ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರು ಯುವ ಸಮ್ಮೇಳನವನ್ನು ಹುಬ್ಬಳ್ಳಿಯಲ್ಲಿ ಉದ್ಘಾಟನೆ ಮಾಡಿದರೂ ಧಾರವಾಡದ ಪ್ರಮುಖ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ‍್ಯಕ್ರಮಗಳು ನಡೆಯುತ್ತಿವೆ.