ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 163 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 4,46,79,924ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,720ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,423ಕ್ಕೆ ಇಳಿಕೆಯಾಗಿದೆ.
ಇನ್ನು ಭಾರತದಲ್ಲಿ ಒಂದೇ 1,56,040 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸ ಲಾಗಿದ್ದು, ಈ ವರೆಗೂ 91,21,07,256 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿ ಯವರು ಚಾಲನೆ ನೀಡಿದ್ದು, ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,13,96,147 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.
Read E-Paper click here