Saturday, 23rd November 2024

ಆಫ್ರಿಕಾ ವಿರುದ್ಧದ ಸರಣಿ ಡ್ರಾ: ಆಸ್ಟ್ರೇಲಿಯಾ ಚಾಂಪಿಯನ್‌ಶಿಪ್ ಫೈನಲ್‌ಗೆ

ಸಿಡ್ನಿ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಕೊನೆಯ ಪಂದ್ಯವನ್ನು ಡ್ರಾ ಮಾಡಿಕೊಂಡ ಆಸ್ಟ್ರೇಲಿಯಾ, 2-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಆಸ್ಟ್ರೇಲಿಯಾ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಗೆಲುವಿನ ನಂತರ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿತು.

ಆಸ್ಟ್ರೇಲಿಯಾ 75.56 ಶೇಕಡಾವಾರು ಅಂಕ (PCT) ಗಳೊಂದಿಗೆ ಅಗ್ರಸ್ಥಾನದಲ್ಲಿದೆ, ಟೀಂ ಇಂಡಿಯಾ 58.93 ಪಿಸಿಟಿಯೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಕ್ರಮವಾಗಿ 53.33 ಮತ್ತು 48.72 ಪಿಸಿಟಿಯೊಂದಿಗೆ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ.

ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮುಂದಿನ ಟೆಸ್ಟ್ ಸರಣಿಯನ್ನು ಭಾರತದ ವಿರುದ್ಧ ಆಡಲಿದೆ. ಒಂದು ವೇಳೆ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಸೋತರೂ ಕೂಡ ಆಸ್ಟ್ರೇಲಿಯಾ ಎರಡನೇ ಸ್ಥಾನಕ್ಕೆ ಕುಸಿಯಲಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಆಡಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ಸರಣಿ ಗೆಲ್ಲುವ ಮೂಲಕ ಭಾರತದ ಫೈನಲ್ ಹಾದಿ ಸುಲಭವಾಗಿದೆ. ಡಿಸೆಂಬರ್ ನಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಸರಣಿಯನ್ನು 2-0 ಅಂತರದಲ್ಲಿ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದ ಭಾರತ 2ನೇ ಸ್ಥಾನಕ್ಕೆ ಜಿಗಿತ ಕಂಡಿದೆ.

 
Read E-Paper click here