Monday, 25th November 2024

ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪುರ್ಬಾ ಬರ್ಧಮಾನ್ ಜಿಲ್ಲೆಯ ಕೇತುಗ್ರಾಮದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಸಕ್ರಿಯ ಟಿಎಂಸಿ ಕಾರ್ಯಕರ್ತನಾಗಿದ್ದ ದುಲಾಲ್ ಶೇಖ್ ಅವರು ಅಮ್ಗಾರಿಯಾ ಬಜಾರ್ನ ಸ್ಟಾಲ್ನಲ್ಲಿ ಚಹಾ ಕುಡಿಯುತ್ತಿದ್ದಾಗ ಪಾಯಿಂಟ್-ಬ್ಲಾಂಕ್ ರೇಂಜ್ ನಿಂದ ಶೂಟ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.
ತಕ್ಷಣವೇ ಶೇಖ್(50) ಅವರನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸ ಲಾಯಿತು ಎಂದು ಹೇಳಿದ್ದಾರೆ.
ಟಿಎಂಸಿ ರಾಜ್ಯ ಉಪಾಧ್ಯಕ್ಷ ಜಾಯ್ ಪ್ರಕಾಶ್ ಮಜುಂದಾರ್ ಮಾತನಾಡಿ, ‘‘ಪಂಚಾಯತ್ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಸಿಪಿಐ(ಎಂ) ವಿವಿಧ ಕ್ಷೇತ್ರಗಳಲ್ಲಿ ಪ್ರಭಾವಿ ಟಿಎಂಸಿ ಸದಸ್ಯರನ್ನು ತೊಲಗಿಸಲು ಸಂಚು ರೂಪಿಸುತ್ತಿವೆ. ಶೇಖ್ ಅವರು ಇಂತಹ ಕೃತ್ಯಕ್ಕೆ ಬಲಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.