ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 114 ಹೊಸ ಪ್ರಕರಣ ಪತ್ತೆಯಾಗಿದೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,81,154ಕ್ಕೆ ಏರಿಕೆಯಾಗಿದೆ. ಅಲ್ಲದೇ, ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,726ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಗಳ ಸಂಖ್ಯೆ 2,119ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 144 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,48,309ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 74,320 ಮಂದಿಯನ್ನು ಪರೀಕ್ಷೆಗೊಳಪಡಿಸ ಲಾಗಿದ್ದು, ಈ ವರೆಗೂ 91,33,29, 336 ಮಂದಿಯನ್ನು ಪರೀಕ್ಷೆಗೊಳ ಪಡಿಸಲಾಗಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,17,06,017 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.