ಡಿಸೆಂಬರ್ 22 ರಂದು ನರ್ಸಿಂಗ್ ಪರೀಕ್ಷೆಗಳು ಪ್ರಾರಂಭವಾಗಿದ್ದು, ಡಿಸೆಂಬರ್ 25ಕ್ಕೆ ಅಂತ್ಯಗೊಂಡಿವೆ. ರಾಜ್ಯದಲ್ಲಿ ಒಟ್ಟು 88,000 ವಿದ್ಯಾರ್ಥಿಗಳು ಶ್ರಮಪಟ್ಟು ಓದಿ ಪರೀಕ್ಷೆ ಗಳನ್ನು ಬರೆದಿದ್ದಾರೆ. ಆದರೆ ಬೆಂಗಳೂರಿನ ಬಾಣಸವಾಡಿಯ ಕೆಲವು ಪರೀಕ್ಷಾ ಕೇಂದ್ರ ಗಳಲ್ಲಿ ನಕಲು ನಡೆದಿದೆ ಎಂದು ಮರುಪರೀಕ್ಷೆ ನಡೆಸಲಾಗುತ್ತಿದೆ.
ಈಗಾಗಲೇ ವಿದ್ಯಾರ್ಥಿಗಳು ತುಂಬಾ ಶ್ರಮಪಟ್ಟು, ನಿದ್ದೆಗೆಟ್ಟು ಪರೀಕ್ಷೆಗಳನ್ನು ಬರೆದಿರು ತ್ತಾರೆ. ಏಕಾಏಕಿ ಮರುಪರೀಕ್ಷೆ ಮಾಡುವುದರಿಂದ ಶ್ರಮಹಾಕಿದ ವಿದ್ಯಾರ್ಥಿಗಳಿಗೆ ಕಷ್ಟ ವಾಗುತ್ತದೆ ಎಂದು ಅಳಲು ತೋಡಿಕೊಂಡರು.
ಈಗ ಪರೀಕ್ಷೆ ಬರೆಯಲು ಜನವರಿ 21ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಆದರೆ ಕೋರ್ಟ್ ಇದಕ್ಕೆ ಸಮ್ಮತಿ ಕೊಟ್ಟಿಲ್ಲ. ಮಕ್ಕಳ ಆಸಕ್ತಿಯ ಮೇರೆಗೆ ಮರುಪರೀಕ್ಷೆ ನಡೆಸುವಂತೆ ಆದೇಶ ನೀಡಿರುತ್ತದೆ. ಆದರೆ ಬೋರ್ಡ್‌ನವರು ವಿದ್ಯಾರ್ಥಿಗಳಿಗೆ ಯಾವುದೇ ಮಾಹಿತಿ ನೀಡದೇ, ಸಲಹೆ ಪಡೆಯದೇ ಏಕಾಏಕಿ ಮರುಪರೀಕ್ಷೆ ಮಾಡಲು ನಿರ್ಧರಿಸಿದ್ದಾರೆ. ಕೆಎಸ್‌ಡಿಎನ್ ಬೋರ್ಡ್‌ನವರು ಈ ರೀತಿ ದಿಢೀರನೇ ಮರುಪರೀಕ್ಷೆ ನಡೆಸಲು ತೀರ್ಮಾನಿಸಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿ ಹೋಗಿ ದ್ದಾರೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದರು.