ತುಮಕೂರು: ಅನಾಥ ಮಹಿಳೆಯ ಅಂತ್ಯಸಂಸ್ಕಾರವನ್ನು ಬಜರಂಗದಳದ ಕಾರ್ಯಕರ್ತರು ನೆರವೇರಿಸಿ ಮಾನವೀಯತೆ ಮೆರೆ ದಿದ್ದಾರೆ.
ತಾಲೂಕಿನ ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲಹಳ್ಳಿ ಜನತಾ ಕಾಲೋನಿಯಲ್ಲಿ ಮಹಿಳೆಯೊಬ್ಬರು ಅನಾರೋಗ್ಯ ದಿಂದ ಮೃತಪಟ್ಟಿದ್ದರು. ಮೃತ ಮಹಿಳೆಗೆ ಕುಟುಂಬಸ್ಥರು ಯಾರು ಇಲ್ಲದ ಕಾರಣ ಗೊಲ್ಲಹಳ್ಳಿ ಘಟಕದ ಭಜರಂಗದಳ ಕಾರ್ಯ ಕರ್ತರು ಅಂತ್ಯ ಸಂಸ್ಕಾರ ನೆರವೇರಿಸಿ ಹೃದಯವಂತಿಕೆಗೆ ಸಾಕ್ಷಿಯಾಗಿದ್ದಾರೆ.
ಹಿಂದೂ ಧಾರ್ಮಿಕ ವಿಧಿ ವಿಧಾನಗಳಂತೆ ಗೊಲ್ಲಹಳ್ಳಿಯ ಜನತಾ ಕಾಲೋನಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.