ಚೆನ್ನೈ( ತಮಿಳುನಾಡು) : ತಮಿಳುನಾಡಿನ ಕಡಲೂರು ಜಿಲ್ಲೆಯ ವೃದ್ದಾಚಲಂ ಬಳಿಯ ಕೋಮಂಗಲಂನಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಕಾಲುವೆಗೆ ಬಿದ್ದ ಪರಿಣಾಮ ಸುಮಾರು 20 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಚಾಲಕ ಮಿನಿವ್ಯಾನ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ತಕ್ಷಣವೇ ವೃದ್ದಾಚಲಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.