Saturday, 14th December 2024

ಶ್ರದ್ಧಾ ವಾಕರ್ ಹತ್ಯೆ ಪ್ರಕರಣ: 6,629 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ 6,629 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಆರೋಪಿ ಅಫ್ತಾಬ್ ಪೂನಾವಾಲಾನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಅಫ್ತಾಬ್ ಪೂನವಾಲಾ ತನ್ನ ಸ್ನೇಹಿತೆ ಶ್ರದ್ಧಾ ವಾಕರ್‌ನನ್ನು ಕೊಂದು ನಂತರ ಆಕೆಯ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ, ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಿ ಮೂರು ತಿಂಗಳ ಅವಧಿಯಲ್ಲಿ ತನ್ನ ಮನೆಯ ಸಮೀಪವಿರುವ ಛತ್ತರ್‌ಪುರ ಅರಣ್ಯದಲ್ಲಿ ವಿಲೇವಾರಿ ಮಾಡಿದ್ದನು.

ಪ್ರಕರಣ ಸಂಬಂಧ ಪೊಲೀಸರು 6,500 ಪುಟಗಳನ್ನು ಹೊಂದಿರುವ ಚಾರ್ಜ್ ಶೀಟ್ ಸಿಲ್ಲಿಸಿದ್ದು, 100 ಸಾಕ್ಷ್ಯಗಳನ್ನು ಒಳಗೊಂಡಿದೆ. ಪ್ರಸ್ತುತ ಇದನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ.