Thursday, 12th December 2024

ಅತ್ಯುತ್ತಮ ಮತದಾರರ ಪಟ್ಟಿ ಪರಿಷ್ಕರಣೆ : ಜಿಲ್ಲೆಗೆ ರಾಜ್ಯ ಮಟ್ಟದ ಪ್ರಶಸ್ತಿ

ತುಮಕೂರು: ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಕರ್ನಾಟಕ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿಯ ವತಿಯಿಂದ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಿಗೆ ಪ್ರಶಸ್ತಿ ನೀಡಿದರು.
ವಿಧಾನಸಭೆ, ವಿಧಾನಪರಿಷತ್ ಮತ್ತು ಲೋಕಸಭಾ ಮತಕ್ಷೇತ್ರಗಳ ಚುನಾವಣೆಗಳ ಜಿಲ್ಲಾ ಮಟ್ಟದಲ್ಲಿ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಚುನಾವಣಾ ಧಿಕಾರಿಗಳದ್ದಾಗಿರುತ್ತದೆ.
ಈ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆಯು ಅತ್ಯಂತ ಮಹತ್ವದ ಕಾರ್ಯವಾಗಿದ್ದು, 2022ರಲ್ಲಿ ನಡೆದ ಚುನಾವಣೆಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಈ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಲಾ ಗುತ್ತದೆ.