ಮುಂಬೈ: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಮೊಣಕಾಲು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಫಿಟ್‌ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ತಂಡಕ್ಕೆ ವಾಪಸಾಗಲು ಸಿದ್ಧರಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ ಲಭ್ಯವಾಗಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ತಂಡಕ್ಕೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್ ಮೊದಲನೇ ಪಂದ್ಯದಲ್ಲೇ ಮೊಣಕಾಲು ಗಾಯಕ್ಕೆ ತುತ್ತಾಗುವ ಮೂಲಕ ಸರಣಿಯಿಂದ ಹೊರಬಿದ್ದಿದ್ದರು. ಭಾರತದ ವಿಕೆಟ್ ಕೀಪರ್ ರಿಷಬ್ ಪಂತ್ ಈ ವರ್ಷ ಕ್ರಿಕೆಟ್ ಆಡುವುದು ಅನುಮನವಾಗಿದೆ. ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ.
“ಸಂಜು ಸ್ಯಾಮ್ಸನ್ ಗಾಯದ ಮೌಲ್ಯಮಾಪನಕ್ಕಾಗಿ ಎನ್‌ಸಿಎಗೆ ಮರಳಿದ್ದಾರೆ. ಅವರು 100 ಪ್ರತಿಶತ ಫಿಟ್ ಆಗಿದ್ದು, ಆಯ್ಕೆಗೆ ಲಭ್ಯವಿದ್ದಾರೆ. ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗಲು ಇನ್ನೂ ಒಂದು ತಿಂಗಳು ಸಮಯ ಬೇಕಾಗುತ್ತದೆ. ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿ ವೇಳೆಗೆ ಅವರು ಫಿಟ್ ಆಗುತ್ತಾರೆ ಎಂದು ನಿರೀಕ್ಷೆ ಮಾಡಲಾಗಿದೆ.” ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ಮಾಡಿದೆ.