ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 109 ಹೊಸ ಪ್ರಕರಣ ಪತ್ತೆಯಾಗಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,82,639ಕ್ಕೆ ಏರಿಕೆ ಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,740ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,842ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 108 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,50,057ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,36,102 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 91,51,17, 324 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,38,07,968 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.