ಇದೇ ವೇಳೆ ಬಜೆಟ್ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿ ಮಾಡಿ ಬಜೆಟ್ಗೆ ಸಂಬಂಧ ಪಟ್ಟಂತೆ ಮಾತುಕತೆ ನಡೆಸಿದ್ದಾರೆ. ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ ದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗವಹಿಸಿ ಸಚಿವ ಸಂಪುಟವನ್ನು ಮುಗಿಸಿ ನೇರ ವಾಗಿ ಬಜೆಟ್ ಕಲಾಪಕ್ಕೆ ಆಗಮಿಸಿದರು.
ಈ ವೇಳೆ ಬಜೆಟ್ ಮಂಡನೆ ಮಾಡುತ್ತಿರುವ ಸಚಿವೆ ನಿರ್ಮಲ ಸೀತರಾಮನ್ ಅವರು, ದೇಶದಲ್ಲಿ 2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜು ಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
Read E-Paper click here