Saturday, 23rd November 2024

ಜಿಡಿಪಿಯ ಶೇ. 3.3 ರಷ್ಟು ಉದ್ಯೋಗ ಸೃಷ್ಟಿಗೆ ಮೀಸಲು

ವದೆಹಲಿ: ಬಜೆಟ್ ನಲ್ಲಿ ರೈತರಿಗೆ ಯುವಕರು, ಮಹಿಳೆಯರು, ಒಬಿಸಿ ಈ ಸಮುದಾಯಕ್ಕೆ ಬಜೆಟ್ ನಲ್ಲಿ ಪೋಕಸ್ ಮಾಡಲಾಗಿದೆ.

ಆಧಾರ್, ಯುಪಿಐ, ಕೊವಿನ್ ವಿಶ್ವಮಾನ್ಯತೆ ಸಿಕ್ಕಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಗೆ 2 ಲಕ್ಷ ಕೋಟಿ ರೂ. ಮಿಸಲಿಡ ಲಾಗಿದೆ. ಒಂದು ವರ್ಷ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮಹಿಳೆಯರ ಆರ್ಥಿಕ ಸಬಲೀಕರಣದ ಗುರಿ ಹೊಂದಲಾಗಿದ್ದು, ಕರಕುಶಲಕರ್ಮಿಗಳಿಗೆ ನುತನ ಯೋಜನೆ ಘೋಷಣೆ ಮಾಡಲಾ ಗಿದ್ದು, ಪ್ರಧಾನಿ ವಿಶ್ವಕರ್ಮ ಕೌಶಲ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಜ್ವಲ ಯೋಜನೆಯಡಿ 6 ಕೋಟಿ ಜನರಿಗೆ ಸಂಪರ್ಕ, ಆರ್ಥಿಕತೆಯು ಹೆಚ್ಚು ಔಪಚಾ ರಿಕವಾಗಿದೆ. ಸಿರಿಧಾನ್ಯಗಳ ಕೃಷಿಗೆ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಶ್ರೀ ಅನ್ನ ಜೋಳ, ಶ್ರೀ ಅನ್ನ ರಾಗಿ, ಸಜ್ಜೆ ಸಿರಿಧಾನ್ಯಗಳ ಯೋಜನೆ ಜಾರಿ, ಹಸಿರು ಕ್ರಾಂತಿ ಸರ್ವರನ್ನು ಒಳಗೊಂಡ ಅಭಿವೃದ್ಧಿ, ಮಹಿಳೆಯರ ಆರ್ಥಿಕ ಸಬಲೀಕರಣ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಜೆಟ್ ನಲ್ಲಿ ಸಪ್ತ ಸೂತ್ರಗಳನ್ನು ಅಳವಡಿಸಲಾಗಿದೆ. ರೈತರು, ಪರಿಶಿಷ್ಟ ಜಾತಿಯ ಮಹಿಳೆಯರಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗಿದೆ. ವಿಶೇಷವಾಗಿ, ಜಮ್ಮು ಮತ್ತು ಕಾಶ್ಮೀರ ಲಡಾಖ್ಗೆ ಒತ್ತು ನೀಡಲಾಗಿದೆ.ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ವನ್ನು ರಚಿಸಲಾಗುವುದು. ಸ್ಟಾರ್ಟ್ ಅಪ್ ಗಳ ಬೆಳವಣಿಗೆಗೆ ಅಂತರ್ಗತ ಪರಿಹಾರ ಇರುತ್ತದೆ. ಕೃಷಿ-ಸ್ಟಾರ್ಟ್ ಅಪ್ ಗಳನ್ನು ತೆರೆಯಲು ಅವರನ್ನು ಪ್ರೋತ್ಸಾಹಿಸಲು ಕೃಷಿ ವರ್ಧನೆ ನಿಧಿಯನ್ನು ನೀಡಲಾಗುವುದು. ನಾವು ವಿಶ್ವದಲ್ಲೇ ಅತಿ ದೊಡ್ಡ ಆಹಾರ ಧಾನ್ಯಗಳ ಉತ್ಪಾದಕರು ಮತ್ತು ಎರಡನೇ ಅತಿದೊಡ್ಡ ರಫ್ತುದಾರರಾಗಿದ್ದೇವೆ ಎಂದರು.

ಕೃಷಿಗೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆ ನೀಡಲಾಗುವುದು.

ಕೃಷಿಗೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆ ನೀಡಲಾಗುವುದು. ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್ ಅಪ್ ಗಳನ್ನು ಪ್ರೋತ್ಸಾಹಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಬೇಕು. ಭದ್ರಾ ಮೇಲ್ದೆಂಡೆ ಯೋಜನೆಗೆ 5,630 ಕೋಟಿ ರೂ. ಘೋಷಣೆ ಮಾಡಲಾಗಿದೆ.

ಉದ್ಯೋಗ ಸೃಷ್ಟಿಗೆ 10 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು. ಜಿಡಿಪಿಯ ಶೇ. 3.3 ರಷ್ಟು ಉದ್ಯೋಗ ಸೃಷ್ಟಿಗೆ ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

 
Read E-Paper click here