ಬೆಂಗಳೂರು: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಫೆ. 17ರಂದು ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಅದಕ್ಕೂ ಮೊದಲೇ ಮೋದಿ ಸರ್ಕಾರ ಕರ್ನಾಟಕಕ್ಕೆ ಹಲವು ಯೋಜನೆ ಗಳನ್ನು ಘೋಷಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಹಣವನ್ನು ಮೀಸಲಿಟ್ಟಿರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ.
2022ರ ಏಪ್ರಿಲ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇಲ್ಮಟ್ಟದ ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಈಗಾಗಲೇ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ಒಮ್ಮೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದರೆ 16,000 ಕೋಟಿ ರೂ. ಈ ಯೋಜನೆಗೆ ಲಭ್ಯವಾಗಲಿದೆ ಎಂದು ಅವರು ಹೇಳಿದ್ದರು.
ಭದ್ರಾ ಮೇಲ್ದಂಡೆ ಯೋಜನೆಯು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಸುಮಾರು 2.25 ಲಕ್ಷ ಹೆಕ್ಟೇರ್‌ಗೆ ಸುಮಾರು 19 ಟಿಎಂಸಿ ಅಡಿ ನೀರು ನೀರಾವರಿಯನ್ನು ಒದಗಿಸುತ್ತದೆ.
ಈ ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಮತಗಳೂ ಹೆಚ್ಚಾಗಿರುವುದರಿಂದ ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಪ್ರಾತಿನಿಧ್ಯ ನೀಡಿದೆ.
ಎಲ್ಲ ರಾಜ್ಯಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲವನ್ನು ಮುಂದುವರೆಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ರಾಜ್ಯಗಳ ಬಂಡವಾಳ ವೆಚ್ಚದ ಮಿತಿಯನ್ನು 1.3 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ.
Read E-Paper click here